ಬಹಳ ಹಿಂದೆ ಟಿಬೆಟ್ಟಿನ ಬೌದ್ಧ ಆಶ್ರಮ ಒಂದರಲ್ಲಿ ಬಹಳಷ್ಟು ಬೌದ್ಧ ಬಿಕ್ಷುಗಳು ಮೌನವಾಗಿ ಧ್ಯಾನ ಮಾಡುತ್ತಾ ಅಧ್ಯಾತ್ಮಿಕ ಸಾಧನೆಯಲ್ಲಿ ತೊಡಗಿದ್ದರಂತೆ.ಆಗಾಗ ಅಲ್ಲಿಗೆ ಎಲ್ಲೂ ವಾಸಿಯಾಗದಂತಹ ಮಾನಸಿಕ ಅಸ್ವಸ್ಥರನ್ನು ತಂದು ಬಿಡುತ್ತಿದ್ದರಂತೆ.ಅಲ್ಲಿದ್ದ ಸನ್ಯಾಸಿಗಳು ತಮ್ಮ ಪಾಡಿಗೆ ತಾವು ತಮ್ಮ ಕೆಲಸಮಾಡುತ್ತಾ,ಧ್ಯಾನ ಮಾಡುತ್ತಾ ,ಮೌನದಿಂದ ಇರುತ್ತಿದ್ದರಂತೆ.ಮಾನಸಿಕ ಅಸ್ವಸ್ಥರನ್ನು ,ತಮ್ಮ ಸಾಧನೆಯನ್ನೂ,ಮನೋನಿಗ್ರಹವನ್ನೂ, ಪರೀಕ್ಷೆ ಮಾಡಲು ಬಂದಿರುವ ಗುರುಗಳು ಎಂದು ಭಾವಿಸುತ್ತಿದ್ದರಂತೆ.ಅವರು ಎಷ್ಟೇ ಕೂಗಾಡಿದರೂ,ಗಲಾಟೆ ಮಾಡಿದರೂ,ಯಾರೂ ಅವರ ಕಡೆ ಗಮನವನ್ನೇ ಕೊಡದೆ,ಮೌನವಾಗಿ ಧ್ಯಾನ ಮಾಡುತ್ತಾ ಇದ್ದು ಬಿಡುತ್ತಿದ್ದರಂತೆ!ಅವರನ್ನು ಯಾರೂ ವಿಚಾರಿಸಲೂ ಹೋಗುತ್ತಿರಲಿಲ್ಲವಂತೆ.ಯಾವುದೇ ಕಾರಣಕ್ಕೂ ಅವರನ್ನು ಅಲ್ಲಿಂದ ತಪ್ಪಿಸಿಕೊಳ್ಳಲು ಬಿಡುತ್ತಿರಲಿಲ್ಲವಂತೆ.ಮಾನಸಿಕ ಅಸ್ವಸ್ಥರು ಕೂಗಿ ,ಗಲಾಟೆ ಮಾಡಿ,ಸುಸ್ತಾಗಿ ಕೆಲವೇ ದಿನಗಳಲ್ಲಿ ತಣ್ಣಗಾಗಿ,ಅಲ್ಲಿರುವ 'ಬುದ್ಧಿಸ್ಟ್ ಮಾಂಕ್' ಗಳಂತೆ ತಾವೂ ತಮ್ಮ ಪಾಡಿಗೆ ಮೌನವಾಗಿ ಧ್ಯಾನ ಮಾಡುತ್ತಾ ಕುಳಿತು ಬಿಡುತ್ತಿದ್ದರಂತೆ!ಅಲ್ಲಿದ್ದ ಕೆಲವೇ ತಿಂಗಳುಗಳಲ್ಲಿ ಸಂಪೂರ್ಣ ಗುಣಮುಖರಾಗಿ ಹೊರಬರುತ್ತಿದ್ದರಂತೆ.ಮನಸ್ಸು ತಣ್ಣಗಾದಾಗ ಮನಸ್ಸಿನ ಹೊಯ್ದಾಟ,ತಳಮಳ,ಮಾನಸಿಕ ಸಮಸ್ಯೆಗಳು ಇಲ್ಲವಾಗುತ್ತವೆ!
ಈ ಬರಹದಲ್ಲಿ ನಮಗೆಲ್ಲಾ ಒಂದು ಪಾಠವಿದೆ ಅನಿಸುತ್ತದೆ.ನಮ್ಮ ದಿನ ನಿತ್ಯದ ಜೀವನದಲ್ಲಿ ಎಷ್ಟೋ ಜನ ಕೂಗಾಡಿ, ಗಲಾಟೆ ಮಾಡಿ,ನಮ್ಮ ನೆಮ್ಮದಿ ಕೆಡಿಸುವವರು ಸಿಗಬಹುದು.ಅವರನ್ನು ನಾವು ನಮಗೆ ತಾಳ್ಮೆಯನ್ನು ಕಲಿಸಲು ಬಂದಿರುವ ಗುರುಗಳು ಎಂದೇಕೆ ತಿಳಿಯಬಾರದು? ನಮ್ಮೆಲ್ಲರ ಬದುಕಿನಲ್ಲಿ ಇನ್ನೂ ಹೆಚ್ಚಿನ ಶಾಂತಿ,ನೆಮ್ಮದಿ ಸಿಗುವಲ್ಲಿ ಈ ಲೇಖನ ಪ್ರಯೋಜನಕಾರಿಯಾಲಿ ಎಂದು ಹಾರೈಸುತ್ತೇನೆ. ನಮಸ್ಕಾರ.
(ಸಾಧಾರಿತ)
Doctor sir,a good observation but very very difficult to follow atleast to me..!!
ReplyDeleteದೇಸಾಯಿ ಸರ್;ಕಷ್ಟ ಆದರೆ ಅಸಾಧ್ಯವಲ್ಲ.ಅಲ್ಲವೇ?ಪ್ರತಿಕ್ರಿಯೆಗೆ ಧನ್ಯವಾದಗಳು.
Deleteಮನೋ ಸ್ಥೀಮಿತ ಮತ್ತು ಹೊರ ಕಿವಿಯ ಕವಾಟ ತಂತ್ರವನ್ನು ಸಮರ್ಥವಾಗಿ ನಿರೂಪಿಸಿದ್ದೀರ ಸಾರ್.
ReplyDeleteಕೂಗಾಡಿಕೊಳ್ಳುವವರು ಆ ಕ್ಷಣಕ್ಕೆ ಹಿಂಸೆ ಕೊಟ್ಟರು, ನಾವು ಪ್ರತಿ ಕೂಗಾಡಿದರೆ ನಷ್ಟ ನಮಗೆ ಎನ್ನುವುದು ಈಗ ನನಗೂ ಚೆನ್ನಾಗಿ ಅರ್ಥವಾಯಿತು.
ಬದರಿ ಸರ್;ನಾವು ಕಲಿಯುವುದು ಬಹಳಷ್ಟಿದೆ!!ಅಲ್ಲವೇ?ಪ್ರತಿಕ್ರಿಯೆಗೆ ಧನ್ಯವಾದಗಳು.
Deleteಡಾಕ್ಟ್ರೇ: ಇದು ನಿಜಕ್ಕೂ ಬದುಕಿಗೆ ಅದ್ಬುತ ಪಾಠವೇ ಸರಿ!
ReplyDeleteಶಿವು ಸರ್;ಇದು ನಿಜಕ್ಕೂ ನಮ್ಮೆಲ್ಲರಿಗೂ ಬದುಕಿನ ಪಾಠ.ಪ್ರತಿಕ್ರಿಯೆಗೆ ಧನ್ಯವಾದಗಳು.
ReplyDeleteನಿಜ ಸರ್, ನಾವು ಸುಮ್ಮನಿರುವುದರಿ೦ದ ಸುತ್ತಮುತ್ತಲೂ ಕಿ೦ಚಿತ್ತಾದರೂ ಶಾ೦ತಿಯನ್ನು ಹರಡಬಹುದು. ಉತ್ತಮ ಲೇಖನಕ್ಕಾಗಿ ಧನ್ಯವಾದಗಳು. ನನ್ನ ಬ್ಲಾಗ್ ಗೂ ಬನ್ನಿ.
ReplyDeleteಪ್ರತಿಕ್ರಿಯೆಗೆ ಧನ್ಯವಾದಗಳು ಮೇಡಂ.ನಮಸ್ಕಾರ.
ReplyDeletetumbaa sukta salahe
ReplyDelete