ಅವನ ಹೆಸರು ದಶರಥ್ ಮಾಂಜಿ.ಅವನೊಬ್ಬ ಸಾಧಾರಣ ಅನಕ್ಷರಸ್ಥ ,ಹಿಂದುಳಿದ ವರ್ಗದ ಕೂಲಿ ಕಾರ್ಮಿಕ.ಆದರೆ ಅವನು ಸಾಧಿಸಿದ ಕೆಲಸ ಅದ್ಭತ ಮತ್ತು ಅಸಾಧಾರಣ!!!! ನಮ್ಮ ದೇಶದಲ್ಲೇ ಏಕೆ ,ಪ್ರಪಂಚದಲ್ಲೇ ಅಂತಹ ದಾಖಲೆಯನ್ನು ಯಾರೂ ಸಾಧಿಸಿಲ್ಲ.ಅವನ ಸಾಧನೆಯನ್ನು ಶಹಜಾನ್ ತಾಜ್ ಮಹಲ್ ಕಟ್ಟಿದ ಸಾಧನೆಗಿಂತ ಹಿರಿದಾದ ಸಾಧನೆ ಎನ್ನುವವರಿದ್ದಾರೆ.
ದಶರಥ್ ಮಾಂಜಿಯ ಊರು ಬಿಹಾರದ ಗಯಾ ಜಿಲ್ಲೆಯ ಅತೀ ಹಿಂದುಳಿದ ಹಳ್ಳಿ ಘೆಲೋರ್ .ಹಳ್ಳಿಯಲ್ಲಿ ವೈದ್ಯಕೀಯ ಸೌಲಭ್ಯವಾಗಲೀ ಅಥವಾ ಇನ್ನಿತರ ಯಾವುದೇ ಸೌಲಭ್ಯವಾಗಲೀ ಇರಲಿಲ್ಲ.ಹಳ್ಳಿಯ ಮುಂದೆ ದೊಡ್ಡ ಕಲ್ಲಿನ ಬೆಟ್ಟವೊಂದು ಇವರ ಎಲ್ಲಾ ಸೌಕರ್ಯಗಳಿಗೂ ಅಡ್ಡಿಯಾಗಿತ್ತು.ಹತ್ತಿರದ ಊರು ವಜೀರ್ ಗಂಜ್ ಗೆ ಹೋಗಲು ಬೆಟ್ಟವನ್ನು ಬಳಸಿಕೊಂಡು ಎಪ್ಪತ್ತು ಕಿಲೋಮೀಟರ್ ದಾರಿ ಕ್ರಮಿಸ ಬೇಕಾಗಿತ್ತು.
ಒಂದು ಬಾರಿ ದಶರಥ್ ಮಾಂಜಿಯ ಹೆಂಡತಿಗೆ ತೀವ್ರ ಅನಾರೋಗ್ಯವಾಗಿ ,ಸಮಯಕ್ಕೆ ಸರಿಯಾಗಿ ಅವಳಿಗೆ ವೈದ್ಯಕೀಯ ಸೌಲಭ್ಯ ಕೊಡಿಸಲು ಸಾಧ್ಯವಾಗದೆ ತೀವ್ರ ತೊಂದರೆ ಅನುಭವಿಸಬೇಕಾಯಿತು.ಹೆಂಡತಿಯನ್ನು ಬಹಳವಾಗಿ ಪ್ರೀತಿಸುತ್ತಿದ್ದ ದಶರಥ್ ಮಾಂಜಿಯ ಮೇಲೆ ಈ ಘಟನೆ ಬಹಳ ಆಘಾತಕಾರಿ ಪರಿಣಾಮ ಬೀರಿತು.ಆ ರಾತ್ರಿಯೇ ದಶರಥ್ ಮಾಂಜಿ ಒಂದು ನಿರ್ಧಾರಕ್ಕೆ ಬಂದ.ತನ್ನ ಬಳಿ ಇದ್ದ ಆಡುಗಳನ್ನು ಮಾರಿ ,ಬೆಟ್ಟ ಕಡಿಯುವ ಸಲಕರಣೆಗಳಾದ ,ಸುತ್ತಿಗೆ,ಉಳಿ,ಪಿಕಾಸಿ,
ಹಾರೆ,ಸಲಿಕೆ ಮುಂತಾದುವುಗಳನ್ನು ಖರೀದಿ ಮಾಡಿದ.
ಮಾರನೇ ದಿನದಿಂದಲೇ ಬೆಟ್ಟ ಕಡಿದು ದಾರಿ ಮಾಡುವ ಕೆಲಸವನ್ನು ಒಬ್ಬನೇ ಶುರು ಮಾಡಿದ.ಇದು ಸುಮಾರು 1960 ರ ಶುರು.ಇವನ ಕೆಲಸವನ್ನೂ,ಇವನ ಮಾತನ್ನೂ ಕೇಳಿ ಊರಿನ ಜನ ಇವನನ್ನು ಹುಚ್ಚನೆಂದರು."ಒಬ್ಬನೇ ಬೆಟ್ಟ ಕಡಿಯಲು ಸಾಧ್ಯವೇ?"ಎಂದು ನಕ್ಕರು,ಅಪಹಾಸ್ಯ ಮಾಡಿದರು.ಆದರೆ ಇದು ಯಾವುದರಿಂದಲೂ ದಶರಥ್ ವಿಚಲಿತ ನಾಗಲಿಲ್ಲ.ಅವನ ನಿರ್ಧಾರ ಅಚಲವಾಗಿತ್ತು. ಹಗಲು ರಾತ್ರಿ ಎನ್ನದೇ ಕಲ್ಲಿನ ಬೆಟ್ಟ ಕಡಿದು ರಸ್ತೆ ಮಾಡುವ ಕೆಲಸದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ.ಊರು ಬಿಟ್ಟು ಬೆಟ್ಟದ ಬಳಿಯೇ ಒಂದು ಗುಡಿಸಿಲು ಕಟ್ಟಿಕೊಂಡ.ಬರ ಬರುತ್ತಾ ಜನಕ್ಕೆ ಅವನ ಮಹಾನ್ ಕಾರ್ಯದ ಅರಿವಾಗಿ ಅವನಿಗೆ ನೀರು,ಆಹಾರ ತಂದು ಕೊಡುವ ಸಣ್ಣ ಪುಟ್ಟ ಸಹಾಯ ಮಾಡ ತೊಡಗಿದರು. ಸತತ ಇಪ್ಪತ್ತೆರಡು ವರ್ಷ ಏಕಾಂಗಿಯಾಗಿ ಕೆಲಸಮಾಡಿದ ದಶರಥ್ ಮಾಂಜಿ ,1982 ರಲ್ಲಿ ತನ್ನ ಮಹಾನ್ ಕಾರ್ಯದಲ್ಲಿ ಸಫಲನಾಗಿದ್ದ.ಆ ಕಲ್ಲಿನ ಬೆಟ್ಟದಲ್ಲಿ ಒಂದು ಕಿಲೋಮೀಟರ್ ಉದ್ದದ ,ಮೂವತ್ತು ಅಡಿ ಅಗಲದ ,ಇಪ್ಪತ್ತೈದು ಅಡಿ ಎತ್ತರದ ರಸ್ತೆ ನಿರ್ಮಾಣವಾಗಿತ್ತು.ಹತ್ತಿರದ ಊರು ವಜೀರ್ ಗಂಜಿನ ಎಪ್ಪತ್ತು ಕಿಲೋಮೀಟರ್ ದಾರಿ ಬರೀ ಏಳು ಕಿಲೋ ಮೀಟರ್ ಗೆ ಇಳಿದಿತ್ತು.ಆದರೆ ಅವನ ಈ ಮಹಾನ್ ಸಾಧನೆಯನ್ನು ಕಾಣಲು ಅವನ ಹೆಂಡತಿ ಫಾಗುಣೆ ದೇವಿ ಬದುಕಿರಲಿಲ್ಲ.
ನಂತರ ಬಿಹಾರ್ ಸರ್ಕಾರ ಅವನನ್ನು ಸನ್ಮಾನಿಸಿತು.ಇಂತಹ ,ಯಾರೂ ಕಂಡು ,ಕೇಳಿರದ,ಸಾಹಸವನ್ನು ಏಕಾಂಗಿಯಾಗಿ ಮಾಡಿದ ದಶರಥ್ ಮಾಂಜಿ ಆಗಸ್ಟ್ 17,2007 ರಲ್ಲಿ ತೀರಿಕೊಂಡ.ಹೆಂಡತಿಯ ಮೇಲಿನ ಅಪ್ರತಿಮ ಪ್ರೀತಿ ಕಲ್ಲಿನ ಬೆಟ್ಟದಲ್ಲಿಯೇ ಒಂದು ದಾರಿ ನಿರ್ಮಿಸಿ ,ಜಗತ್ತೇ ವಿಸ್ಮಯ ಪಡುವಂತೆ ಮಾಡಿದೆ.ದಶರಥ್ ಮಾಂಜಿಯ ಕಥೆಯನ್ನು ಹಲವಾರು ನಿರ್ಮಾಪಕರು ಸಿನಿಮಾ ತಯಾರಿಸಿದ್ದಾರೆ.ಅವನ ಹೆಸರಿನಲ್ಲಿ ಅವನ ಹಳ್ಳಿಯಲ್ಲೊಂದು ಆಸ್ಪತ್ರೆಯಾಗಿದೆ.ಈಗ ಆ ರಸ್ತೆಯಲ್ಲಿ ಹಲವಾರು ವಾಹನ ಗಳು ಓಡಾಡುತ್ತವೆ.ಈಗ ಆ ಹಳ್ಳಿಯ ಜನ 'ಬಾಬ'ದಶರಥ್ ಮಾಂಜಿಯನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಾರೆ. ನಿಜಕ್ಕೂ ದಶರಥ್ ಮಾಂಜಿಯದು ಒಂದು ಸಾರ್ಥಕ ಜೀವನವಲ್ಲವೇ!!!? ಸಣ್ಣ ಪುಟ್ಟ ಸವಾಲಿಗೂ ಎದೆ ಗುಂದುವ ನಮ್ಮಂತಹ ಸಾಮಾನ್ಯರಿಗೆ ದಶರಥ್ ಮಾಂಜಿ ಆದರ್ಶ ಪ್ರಾಯನಾಗಿದ್ದಾನೆ!!! ನಮಸ್ಕಾರ.